ಅಭ್ಯರ್ಥಿ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:
👉 1. ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ.
👉 2. ಅಭ್ಯರ್ಥಿಯು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು ಮತ್ತು ತಾಲ್ಲೂಕು ತಹಶೀಲ್ದಾರ್ ರವರಿಂದ ಪಡೆದ ದೃಢೀಕೃತ ವಾಸಸ್ಥಳ ಪ್ರಮಾಣ ಪತ್ರವನ್ನು ಸಲ್ಲಿಸುವುದು.
👉 3. ಚುನಾವಣಾ ಗುರುತಿನ ಚೀಟಿ,
👉 4. ಜಾತಿ ಪ್ರಮಾಣ ಪತ್ರವನ್ನು ತಾಲ್ಲೂಕು ತಹಶೀಲ್ದಾರ್ ರವರಿಂದ ಪಡೆದು ಸಲ್ಲಿಸತಕ್ಕದ್ದು. (ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು).
👉 5. ಯಾವುದೇ ಮೀಸಲಾತಿಯನ್ನು/ಸಡಿಅಕೆಯನ್ನು ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ದೃಢೀಕೃತ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
👉 6. ಕನ್ನಡ ಮಾಧ್ಯಮ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಸಲ್ಲಿಸತಕ್ಕದ್ದು.
👉 7. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
👉 8. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಪ್ರೇರಕ/ಉಪಪ್ರೇರಕರುಗಳಿಗೆ ಆದ್ಯತೆ ನೀಡಲಾಗುವುದು. ಕೇಂದ್ರಗಳ
👉 9. ಪ್ರೇರಕ/ಉಪಪ್ರೇರಕರು ಮೇಲ್ವಿಚಾರಕರಾಗಿ ಒಂದು ವೇಳೆ ನೇಮಕಗೊಂಡಲ್ಲಿ ಪ್ರೇರಕ/ಉಪಪ್ರೇರಕರ ಹುದ್ದೆಗೆ ರಾಜೀನಾಮೆ ನೀಡತಕ್ಕದ್ದು ಹಾಗೂ ಅಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಈ ಕಛೇರಿಗೆ ಸಲ್ಲಿಸತಕ್ಕದ್ದು.
👉 10. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ:
ಎ) ಸಾಮಾನ್ಯ ವರ್ಗ 35 ವರ್ಷ
29) 200, 229, 30, 329 : 38 ವರ್ಷ
ಸಿ) ಪ.ಜಾ./ಪ.ಪಂ/ಪ್ರ-1 40 ವರ್ಷ
👉 11. ಗ್ರಾಮೀಣ ಅಭ್ಯರ್ಥಿಗೆ ಸಂಬಂಧಪಟ್ಟ ಅಭ್ಯರ್ಥಿ ಪ್ರಮಾಣ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಸಲ್ಲಿಸಬೇಕು.
ಸಂಪೂರ್ಣ ಅಧಿಕೃತ ಅಧಿಸೂಚನೆ ನೋಡಲು ಕೆಳಗಿನ ಲಿಂಕ್ ಒತ್ತಿ
👇 👇 👇 👇 👇 👇 👇 👇 👇 👇 👇 👇 👇
No comments:
Post a Comment