Kpscvani

educational ,employment ,health,sports,political news and other information


Monday, March 21, 2022

Chamarjanagar District Court Recruitment 2022

  shekharagouda       Monday, March 21, 2022
🌍 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರವರ ಕಛೇರಿ, ಚಾಮರಾಜನಗರ ಅಧಿಸೂಚನೆ ಸಂಖ್ಯೆ, ಎಡಿಎಮ್‌ಎನ್ / 01 /2022 ದಿನಾಂಕಃ 05.03.2022

ವಿಷಯ : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ, ಬೆರಳಚ್ಚುಗಾರರು, ಬೆರಳಚ್ಚು - ನಕಲುಗಾರರ, ಆದೇಶ ಜಾರಿಕಾರರು ಹಾಗೂ ಸೇವಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ.

👉 ಮೇಲ್ಕಂಡ ಅಧಿಸೂಚನೆಯನ್ವಯ ಚಾಮರಾಜನಗರದ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 03 ಶೀಘ್ರಲಿಪಿಗಾರರ ಹಿಂಬಾಕಿ ಹುದ್ದೆಗಳಿಗೆ, 02 ಬೆರಳಚ್ಚುಗಾರರ ಹುದ್ದೆಗಳಿಗೆ, 03 ಬೆರಳಚ್ಚು - ನಕಲುಗಾರರ ಹುದ್ದೆಗಳಿಗೆ (01 ಹಿಂಬಾಕಿ ಹುದ್ದೆ, 06 ಆದೇಶ ಜಾರಿಕಾರರ ಹುದ್ದೆಗಳಿಗೆ ಹಾಗೂ 12 ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
👉  ಅಂಗವಿಕಲ ಅಭ್ಯರ್ಥಿ - ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 149 ಎಸ್‌ಆರ್‌ಆರ್ 2020, - ಬೆಂಗಳೂರು, ದಿನಾಂಕಃ 25.09.2020 ರನ್ವಯ ಒಂದು ವೇಳೆ ಅಧಿಸೂಚಿಸಿರುವ ಅಂಗವಿಕಲತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಅಂತಹ ರಿಕ್ತ ಸ್ಥಾನವನ್ನು ಮುಂದಿನ ನೇಮಕಾತಿಗೆ ಮುಂದೊಯ್ಯಲಾಗುವುದು (Carry forward) ಮುಂದಿನ ನೇಮಕಾತಿಯಲ್ಲಿ ಅಂತಹ ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಮೊದಲಿಗೆ ಈ ಹಿಂದಿನ ನೇಮಕಾತಿ ಪ್ರಕ್ರಿಯೆಯಲ್ಲಿ ಅಧಿಸೂಚಿಸಿ ಅಭ್ಯರ್ಥಿಗಳು ಲಭ್ಯವಿಲ್ಲದ ಕಾರಣ ಮುಂದಕ್ಕೆ ತರಲಾದ (Carry forward) ಹುದ್ದೆಗಳಿಗೆ ಎದುರಾಗಿ ಮೊದಲು ಅಂತಹ ಅಂಗವಿಕಲ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುವುದು. ಒಂದು ವೇಳೆ ಎರಡನೇ ನೇಮಕಾತಿಯ ಸಂದರ್ಭದಲ್ಲಿಯೂ ಅರ್ಹ ಅಭ್ಯರ್ಥಿ ಲಭ್ಯವಾಗದೇ ಹೋದಲ್ಲಿ, ಆಯಾ ಪ್ರವರ್ಗದ ಇತರೆ ಅರ್ಹ ಅಭ್ಯರ್ಥಿಯಿಂದ ಭರ್ತಿ ಮಾಡಿಕೊಳ್ಳಲಾಗುವುದು.

👉 ಶೈಕ್ಷಣಿಕ ವಿದ್ಯಾರ್ಹತೆ:

1. ದ್ವಿತೀಯ ಪಿ.ಯು.ಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಮತ್ತು

2. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (Senior grade) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ | ಸೆಕ್ರೆಟರಿಯೇಟಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ.

👉 ಶೈಕ್ಷಣಿಕ ವಿದ್ಯಾರ್ಹತೆ:

1. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.

2. ಡೈವಿಂಗ್ ಲೈಸೆನ್ಸ್‌ನ್ನು ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

3. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು ಕನ್ನಡ ಓದಲು ಹಾಗೂ ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪರೀಕ್ಷೆ ನಡೆಸಲಾಗುವುದು)

👉 ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು 👇

ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದ್ದು.

1. ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

2. ಅಭ್ಯರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಅಭ್ಯರ್ಥಿಗಳಿಗೆ ಸಂದೇಶ ತಲುಪಿದಿದ್ದಲ್ಲಿ ಈ ಪ್ರಾಧಿಕಾರವು ಹೊಣೆಯಾಗುವುದಿಲ್ಲ.

3. ಅಭ್ಯರ್ಥಿಯು ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು,

ಅ) ಬಣ್ಣದ ಭಾವಚಿತ್ರವು ಇತ್ತೀಚಿನದ್ದಾಗಿದ್ದು ಅಳತೆಯಲ್ಲಿ 5cm vv * 3.6 cm ಅಗಲವುಳ್ಳದಾಗಿರಬೇಕು ಮತ್ತು 50 kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿ ಬಣ್ಣದ್ದಾಗಿರಬೇಕು.

ಅ) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು)

ಇ) ಅಭ್ಯರ್ಥಿಯು ಕಪ್ಪು ಬಾಲ್‌ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ 2.5 ಉದ್ದ • 7.5 cm ಅಗಲವುಳ್ಳದಾಗಿರಬೇಕು ಮತ್ತು 26 kb ಅಳತೆಯದ್ದಾಗಿರಬೇಕು ಹಾಗೂ jpg ನಮೂನೆಯಲ್ಲಿರಬೇಕು) ಅಪ್‌ಲೋಡ್ ಮಾಡಬೇಕು. cm

4.

ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನೂ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಶುಲ್ಕವನ್ನು ತುಂಬಿದ ಪ್ರತಿಯನ್ನು Download ಮಾಡಿಕೊ೦ಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರುಪಡಿಸತಕ್ಕದ್ದು.

5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ.

6. ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ನೊಂದಾಯಿಸಲು ಸಲ್ಲಿಸಲು ದಿನಾಂಕಃ 10.04.2022 ರಾತ್ರಿ 11.59 ರವರೆಗೆ ಅವಕಾಶವಿರುತ್ತದೆ ಮತ್ತು ಆನ್‌ಲೈನ್

ಮೂಲಕ ಶುಲ್ಕ ಪಾವತಿಸಲು ದಿನಾಂಕ 11.04.2022 ರಾತ್ರಿ 11.59 ರವರೆಗೆ ಅವಕಾಶವಿರುತ್ತದೆ. ಅರ್ಹ ಅಭ್ಯರ್ಥಿಗಳಿಗೆ SMS & E-Mail ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು. ಸದರಿ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

8. ಆನ್‌ಲೈನ್

ಹೊರತುಪಡಿಸಿ ಇತರ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಗಳನ್ನು

ಪರಿಗಣಿಸಲಾಗುವುದಿಲ್ಲ.

9. ಸೇವಾನಿರತ ಅಭ್ಯರ್ಥಿಗಳು ಅರ್ಜಿಗಳ ಸ್ವೀಕೃತಿಗಾಗಿ ನಿಗದಿಪಡಿಸಲಾದ ದಿನಾಂಕ ಹಾಗೂ ಸಮಯವನ್ನು ಮೀರದಂತೆ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಮತ್ತು ಸಂಬಂಧಪಟ್ಟ ಪ್ರಾಧಿಕಾರದಿಂದ ನೀಡಲಾದ “ನಿರಾಕ್ಷೇಪಣಾ ಪ್ರಮಾಣಪತ್ರ'' ವನ್ನೂ ಹೊಂದಿರತಕ್ಕದ್ದು,

10. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ 'ಡಿ' ಯಲ್ಲಿ, ಪ್ರವರ್ಗ-1ರ ಅಭ್ಯರ್ಥಿಗಳು ನಮೂನೆ 'ಇ' ಯಲ್ಲಿ ಮತ್ತು 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ 'ಎಫ್' ನಲ್ಲಿ ಸಂಬಂಧಿಸಿದ ತಹಸೀಲ್ದಾರರಿಂದ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಹೊಂದಿರತಕ್ಕದ್ದು.

11. ಅಂಗವಿಕಲ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರವನ್ನು ದಿ. 19.11.2005 ರ ಸರ್ಕಾರದ ಅಧಿಕೃತ ಜ್ಞಾಪನಾ ಸಂಖ್ಯೆಃ ಸಿಅಸುಇ/ 115/ ಸನಿ / 2005 ರಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅಂಗವಿಕಲತೆಯ ಬಗ್ಗೆ ಜಿಲ್ಲಾ ಮಟ್ಟದ ವೈದ್ಯಕೀಯ ಮಂಡಳಿಯಿಂದ ಪ್ರಮಾಣಪತ್ರವನ್ನು ಪಡೆದಿರಬೇಕು.

12. ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ | ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸುವುದು.

13. ವಿಧವೆಯರು, ಜೀತ ಕಾರ್ಮಿಕರು ಮತ್ತು ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು.

14. ಮೇಲ್ಕಂಡ ಪ್ರಯೋಜನಗಳನ್ನು ಕ್ಷೇಮು ಮಾಡುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಥವಾ ಅದಕ್ಕಿಂತ ಮುಂಚೆ ಸಕ್ಷಮ ಪ್ರಾಧಿಕಾರಿಗಳು ನೀಡಿದ ಸಂಬಂಧಪಟ್ಟ ಪ್ರಮಾಣ ಪತ್ರಗಳನ್ನು ಹೊಂದಿರತಕ್ಕದ್ದು,

15. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಲ್ಲಿ ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು, ಯೋಜನಾ ನಿರಾಶ್ರಿತ ಅಭ್ಯರ್ಥಿಗಳು, ಗ್ರಾಮೀಣ ಅಭ್ಯರ್ಥಿಗಳು ಹಾಗೂ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯವಿರದೇ ಇದ್ದ ಪಕ್ಷದಲ್ಲಿ ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರೆ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು.

16. ಅಭ್ಯರ್ಥಿಗಳು ತಮ್ಮ ಎಸ್.ಎಸ್ಎಎಲ್.ಸಿ., ಅಂಕಗಳು ಶ್ರೇಣಿಯಲ್ಲಿದ್ದರೆ ಅಥವಾ CGPA ಆಗಿದ್ದರೆ ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು, ಪಡೆದ ಅಂಕಗಳು ಮತ್ತು ಒಟ್ಟು ಶೇಕಡಾವಾರನ್ನು ಕಡ್ಡಾಯವಾಗಿ ನಿಗಧಿತ ಕಾಲಂನಲ್ಲಿ ನಮೂದಿಸಬೇಕು.

17. ಮೌಖಿಕ ಪರೀಕ್ಷೆಯ ಸಮಯದಲ್ಲಿ ದಾಖಲೆಗಳ ಪರಿಶೀಲನೆಗಾಗಿ ಕರೆಯಲ್ಪಡುವ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ (ಜನ್ಮ ದಿನಾಂಕವನ್ನು ತೋರಿಸಲು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ, ಶೀಘ್ರಲಿಪಿ ಪರೀಕ್ಷೆಗಳ ಪ್ರಮಾಣ ಪತ್ರಗಳನ್ನು, ಬೆರಳಚ್ಚು ಪರೀಕ್ಷೆಗಳ ಪ್ರಮಾಣ ಪತ್ರಗಳನ್ನು, ಜಾತಿ ಪ್ರಮಾಣ ಪತ್ರ, ಗ್ರಾಮೀಣ/ ಮಾಜಿ ಸೈನಿಕರು | ವಿಧವೆಯರು | ಅಂಗವಿಕಲರು ಸಂಬಂಧಿಸಿದಂತೆ ಕೇಮು ಮಾಡಿದ ಮೀಸಲಾತಿಗಳು ಇವುಗಳಿಗೆ ಸಂಬಂಧಿಸಿದಂತೆ ಅಗತ್ಯ ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸತಕ್ಕದ್ದು. ಪರಿಶೀಲನೆ ಮಾಡುವಾಗ ಅರ್ಜಿದಾರರು ಅರ್ಜಿಯಲ್ಲಿ ಒದಗಿಸಿರುವ ಮಾಹಿತಿಯು ಸುಳ್ಳೆಂದು ಕಂಡುಬಂದಲ್ಲಿ ಆಗ ಅವರ ಅಭ್ಯರ್ಥಿಕೆಯು ತಿರಸ್ಕೃತವಾಗುತ್ತದೆ ಹಾಗೂ ಅವರು ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕ್ರಿಮಿನಲ್ ಪ್ರಾಸಿಕ್ಯೂಷನ್‌ಗೂ ಸಹ ಗುರಿಯಾಗಬೇಕಾಗುತ್ತದೆ.

18. ನೈತಿಕ ದುರ್ನಡತೆಯಿಂದಾಗಿ 1 ನೀತಿಬಾಹಿರ ಚಟುವಟಿಕೆಗಳಿಂದಾಗಿ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟಿರುವ ವ್ಯಕ್ತಿ ಅಥವಾ ರಾಜ್ಯ | ಕೇಂದ್ರ | ಸ್ಥಳೀಯ ಸಂಸ್ಥೆ ಕಛೇರಿಗಳಲ್ಲಿ ನೈತಿಕ ದುರ್ನಡತೆಯಿಂದಾಗಿ ಅಥವಾ ನೀತಿಬಾಹಿರ ಚಟುವಟಿಕೆಗಳಲ್ಲಿ ಒಳಗಾಗಿ ಅಥವಾ ಆಯ್ಕೆಯಾದ ಅಭ್ಯರ್ಥಿಯು ಬದಲಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾನಾನು ಬಾಹಿರ | ನೀತಿ ಬಾಹಿರ ಚಟುವಟಿಕೆಗಳಲ್ಲಿ ತೊಡಗಿ ಸೇವೆಯಿಂದ ತೆಗೆದು ಹಾಕಿದ್ದಲ್ಲಿ | ವಜಾ ಮಾಡಲ್ಪಟ್ಟಿದ್ದು ಕಂಡುಬಂದಲ್ಲಿ ನೇಮಕಾತಿಗೆ ಅನರ್ಹರಾಗುತ್ತಾರೆ.

19. ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿ ಉದ್ಯೋಗ ಪಡೆಯುವ ಅಭ್ಯರ್ಥಿಗಳನ್ನು ಯಾವುದೇ ಸಮಯದಲ್ಲಾದರೂ ವಜಾ ಮಾಡಲಾಗುತ್ತದೆ ಹಾಗೂ ಕಾನಾನು ಕ್ರಮ ಜರುಗಿಸಲಾಗುವುದು.

20. ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಆಯ್ಕೆ ಪ್ರಾಧಿಕಾರದ ನಿರ್ಧಾರವೇ ಅಂತಿಮವಾಗಿರುತ್ತದೆ.

21. ಪಿಂಚಣಿ ಸೌಲಭ್ಯ : ಸರ್ಕಾರದ ಆದೇಶ ಸಂಖ್ಯೆ ಎಫ್‌ಡಿ(ಎಸ್‌ಪಿಎಲ್) 04 ಪಿಇಟಿ 2005, ದಿನಾಂಕ 31.03.2006 do3.

22. ಅಭ್ಯಥಿಯು ನೇಮಕಾತಿ ಸಂಬಂಧ ಯಾವುದೇ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವುದು ಕಂಡುಬಂದಲ್ಲಿ ಅಂತಹವರನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

23, ಅರ್ಹತಾ ಪರೀಕ್ಷೆಗೆ ಹಾಗೂ ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ಚಾಮರಾಜನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.
  ಸಂಪೂರ್ಣ ಮಾಹಿತಿಗಾಗಿ ಕೆಳಗಿನ ಲಿಂಕ್ ಒತ್ತಿ 
👇 👇 👇 👇 👇 👇 👇 👇 👇 👇 👇👇 👇
              CLICK ON LINK
logoblog
Previous
« Prev Post

No comments:

Post a Comment