ಕಲ್ಯಾಣ-ಕರ್ನಾಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) 420 ಹುದ್ದೆಗಳ ನೇರ ನೇಮಕಾತಿ ಕುರಿತು.
👉 .ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2016 ಮತ್ತು ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು, 2013 ಹಾಗೂ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 03 ಹೈಕಕೋ 2019, ದಿನಾಂಕ: 15.06.2022 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ https://ksp.karnataka.gov.in/ or https://ksp-recruitment.in/ ನಲ್ಲಿ ಆನ್-ಲೈನ್ (On-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ವಿಶೇಷ ಸೂಚನೆಗಳು:
👉 ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೇ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕ್ಕದ್ದು, ನಿಗಧಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
👇 👇 👇 👇 👇 👇 👇 👇👇 👇 👇
No comments:
Post a Comment